Biography of sardar vallabhai patel in kannada
Rajendra prasad!
Biography of sardar vallabhai patel in kannada
ವಲ್ಲಭ್‌ಭಾಯಿ ಪಟೇಲ್
ಸರ್ದಾರ್ ವಲ್ಲಭಭಾಯಿ ಪಟೇಲ್ (ಅಕ್ಟೋಬರ್ ೩೧, ೧೮೭೫ - ಡಿಸೆಂಬರ್ ೧೫, ೧೯೫೦), ಸರ್ದಾರ್ ಪಟೇಲ್ ಎಂದೇ ಕರೆಯಲಾಗುವ, ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರು.
ಭಾರತದ ಪ್ರಪ್ರಥಮ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದರು. ಅವರೊಬ್ಬ ವಕೀಲ(ಬ್ಯಾರಿಸ್ಟರ್) ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದರು.[೧] ಭಾರತ ಮತ್ತು ಇತರೆ ಕಡೆಗಳಲ್ಲಿ, ಅವರನ್ನು ಹೆಚ್ಚಾಗಿ ಸರ್ದಾರ್ ಎಂದು ಕರೆಯಲಾಗುತ್ತಿತ್ತು, ಇದರರ್ಥ ಹಿಂದಿ, ಉರ್ದು, ಮತ್ತು ಪರ್ಷಿಯನ್ ಭಾಷೆಗಳಲ್ಲಿ "ಮುಖ್ಯ"ವಾದ ವ್ಯಕ್ತಿ.
1947ರ ಇಂಡೋ-ಪಾಕಿಸ್ತಾನ ಯುದ್ಧದ ಅವಧಿಯಲ್ಲಿ ಅವರು ಭಾರತೀಯ ಸೈನ್ಯದ ಕಮಾಂಡರ್-ಇನ್-ಚೀಫ್ ಆಗಿ ಸಹ ಕಾರ್ಯ ನಿರ್ವಹಿಸಿದರು. ಇವರು ಕೈಗೊಂಡ ಕಠು ನಿರ್ಧಾರಗಳಿಂದ ಇವರಿಗೆ, ಉಕ್ಕಿನ ಮನುಷ್ಯ ಅಥವಾ ಲೋಹ ಪುರುಷ ಎಂಬ ಬಿರುದೂ ಪ್ರಜಾಮಾನಸದಲ್ಲಿ ದೊರೆತಿತ್ತು.[೨]
ಗುಜರಾತ್‌ನ ಗ್ರಾಮಾಂತರ ಭಾಗದಲ್ಲಿ ಬೆಳೆದ ಪಟೇಲ್, ಯಶಸ್ವಿ ವಕೀಲರಾಗಿದ್ದರು.[೩] ಅವರು ತರುವಾಯ ಗುಜರಾತ್‌ನ ಖೇಡಾ, ಬೊರ್ಸಾದ್ ಮತ್ತು ಬರ್ಡೋಲಿಗಳಿಂದ ರೈತರನ್ನು ಬ್ರಿಟಿಷ್ ಆಳ್ವಿಕೆಯ ವಿರುದ್ಧ ಅಹಿಂಸಾತ್ಮಕ